ಸದಾಶಿವ ಆಯೋಗದ ವರದಿ ಜಾರಿ ಮಾಡದಂತೆ ಒತ್ತಡ ಹೇರಲು ಇಂದು ಸಭೆ

ದಾವಣಗೆರೆ, ನ.26- ಸದಾಶಿವ ಆಯೋಗದ ವರದಿ ಜಾರಿ ಮಾಡದಂತೆ ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಹಾಗೂ ಜಿಲ್ಲಾ ಹಕ್ಕು ಹೋರಾಟ ಸಮಿತಿ ಸಹಯೋಗದಲ್ಲಿ ನಾಳೆ ದಿನಾಂಕ 27ರ ಸೋಮವಾರ ಮಧ್ಯಾಹ್ನ 3ಗಂಟೆಗೆ ನಗರದ ರೋಟರಿ ಬಾಲಭವನದಲ್ಲಿ  ಸಭೆ ಏರ್ಪಡಿಸಲಾಗಿದೆ ಎಂದು ಹೋರಾಟ ಸಮಿತಿಯ ಪ್ರಮುಖ, ನ್ಯಾಯವಾದಿ ರಾಘವೇಂದ್ರ ನಾಯ್ಕ್  ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ವರದಿಯನ್ನು ಯಥಾವತ್ ಜಾರಿಗೆ ತರಬೇಕೆಂದು ಒತ್ತಾಯಿಸಿ ಡಿಸೆಂಬ ರ್‌ನಲ್ಲಿ ನಡೆಯುವ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ಚಲೋ ಆಂದೋ ಲನ ಹಮ್ಮಿಕೊಂಡಿವೆ. ಇದಕ್ಕೆ ಪ್ರತಿಯಾಗಿ ಕರ್ನಾಟಕ ರಾಜ್ಯ ಹಕ್ಕು ಹೋರಾಟ ಸಮಿತಿಯ ಅಧ್ಯಕ್ಷ  ರವಿ ಮಾಕಳಿ  ನೇತೃತ್ವದಲ್ಲಿ ರಾಜ್ಯಾದ್ಯಂತ ಜನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. 

ಅಸಂವಿಧಾನಿಕ, ಅವೈಜ್ಞಾನಿಕ ಮತ್ತು 99ಎಸ್ಸಿ ಜಾತಿ ಪಟ್ಟಿಯಲ್ಲಿರುವ ಜಾತಿ ಸಮುದಾಯಗಳಿಗೆ ಅನ್ಯಾಯ ಮಾಡಿ, ಒಳಮೀಸಲಾತಿ ವರ್ಗೀಕರಿಸಲಾಗಿರುವ ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡದೇ ಕೈಬಿಡಬೇಕೆಂದು ಬೆಳಗಾವಿ ಅಳವೇಶನದಲ್ಲಿ ಯಾವ ರೀತಿ ತಮ್ಮ ನಿಲುವನ್ನು ಬಿಗಿಗೊಳಿಸಿ, ಹೋರಾಟ ನಡೆಸಬೇಕೆಂದು ಅಭಿಪ್ರಾಯ ಮತ್ತು ಸಲಹೆಗಳನ್ನು ಸಂಗ್ರಹಿಸಲು ರಾಜ್ಯದಾದ್ಯಂತ ಸಂಚಾರ ಮಾಡಿ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಈ ಸಭೆ ಆಯೋಜಿಸಲಾಗಿದ್ದು, ವಿವಿಧ ಸಮಾಜಗಳ ಪ್ರಮುಖರು, ಮುಖಂಡರು ಸಭೆಯಲ್ಲಿ ಭಾಗವಹಿಸಬೇಕು ಎಂದು ಕೇಳಿಕೊಂಡರು.

ಸಚಿವ ಕೆ.ಹೆಚ್. ಮುನಿಯಪ್ಪ ಅವರು ಸದಾಶಿವ ವರದಿ ಜಾರಿಗಾಗಿ ಸರ್ಕಾರದ ವಿರುದ್ಧ ಸಂಘಟಿತ ಹೋರಾಟ ಮಾಡಿ ಬಿಸಿ ಮುಟ್ಟಿಸಬೇಕು ಎಂದು ಹೇಳಿದ್ದಾರೆ. ಸಚಿವ ರಾಗಿ ಸ್ವಜನ ಪಕ್ಷಪಾತ ಮೆರೆದ ಮುನಿಯಪ್ಪ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು ಎಂದು ಅವರು ಒತ್ತಾಯಿಸಿದರು.

ಹೋರಾಟ ಸಮಿತಿ ಪ್ರಮುಖರಾದ ಎಸ್.ನಂಜಾನಾಯ್ಕ್, ಶ್ರೀನಿವಾಸ್ ಭೋವಿ, ಕೆ.ಜಿ.ಮಂಜುನಾಥ್, ಕೆ.ಆರ್.ಮಲ್ಲೇಶ್ ನಾಯ್ಕ್, ಚಿನ್ನಸಮುದ್ರ ಶೇಖರನಾಯ್ಕ್, ಲಕ್ಷ್ಮಣ್ ನಾಯ್ಕ್, ಧರ್ಮಾನಾಯ್ಕ್  ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿದ್ದರು.

error: Content is protected !!