ದಾವಣಗೆರೆ ನ. 27 – ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನೆಹರು ಯುವ ಕೇಂದ್ರ, ವಿಶ್ವವಿದ್ಯಾನಿಲಯ, ದೃಶ್ಯಕಲಾ ಮಹಾ ವಿದ್ಯಾಲಯ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಯುವ ಜನೋತ್ಸವ ಆಯ್ಕೆ ಪ್ರಕ್ರಿಯೆಯನ್ನು ನಾಡಿದ್ದು ದಿನಾಂಕ 29 ರಂದು ವಿಶ್ವವಿದ್ಯಾ ನಿಲಯ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.
ವಿವರಗಳಿಗಾಗಿ ಸಹಾಯಕ ನಿರ್ದೇ ಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಥವಾ ದೂ.ಸಂ: 08192-237480 ಸಂಪರ್ಕಿಸಲು ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮೀಬಾಯಿ ತಿಳಿಸಿದ್ದಾರೆ.