ನಗರದಲ್ಲಿ ಇಂದು ಕನಕ ಜಯಂತಿ, ಕಂಚಿನ ಪುತ್ಥಳಿ ಮೆರವಣಿಗೆ

ದಾವಣಗೆರೆ, ನ. 29 – ನಾಳೆ ದಿನಾಂಕ 30ರ ಗುರುವಾರ ನಗರದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಕನಕ ಜಯಂತ್ಯುತ್ಸವ ಕಾರ್ಯಕ್ರಮ ಹಾಗೂ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕನಕ ಜಯಂತಿಯನ್ನು ಜಿಲ್ಲಾಡಳಿತ, ಜಿಲ್ಲಾ ಪಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ, ಕನಕದಾಸರು ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಿಲ್ಲಾ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘ-ಸಮಿತಿಗಳ ಸಂಯುಕ್ತಾಶ್ರಯದಲ್ಲಿ ಆಯೋಜನೆ ಮಾಡಲಾಗಿದೆ ಎಂದರು.

ನ. 30 ರಂದು ಬೆಳಿಗ್ಗೆ 10 ಕ್ಕೆ ಕನಕದಾಸರ ಕಂಚಿನ ಪುತ್ಥಳಿಯೊಂದಿಗೆ ವಿವಿಧ ಜಾನಪದ ಕಲಾ ತಂಡಗಳೊಟ್ಟಿಗೆ ಮೆರವಣಿಗೆ ನಡೆಯ ಲಿದ್ದು, ಹಗೇದಿಬ್ಬ ವೃತ್ತದಿಂದ ಆರಂಭವಾಗಿ, ಬಿ.ಎಸ್. ಚನ್ನಬಸಪ್ಪ ಬಟ್ಟೆ ಅಂಗಡಿ ರಸ್ತೆ, ದೊಡ್ಡಪೇಟೆ, ಹೊಂಡದ ವೃತ್ತ, ಅರುಣಾ ಟಾಕೀಸ್ ಮಾರ್ಗವಾಗಿ ಶ್ರೀ ಬೀರಲಿಂಗೇಶ್ವರ ಆವರಣ ತಲುಪಲಿದೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮೆರವಣಿಗೆಗೆ ಚಾಲನೆ ನೀಡಲಿದ್ದು, ಶಾಸಕ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಜಿ.ಎಂ. ಸಿದ್ದೇಶ್ವರ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.  ನಂತರ ಮಧ್ಯಾಹ್ನ 12 ಕ್ಕೆ ನಗರದ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಕನಕ ಜಯಂತಿ ಕಾರ್ಯಕ್ರಮ ನಡೆಯಲಿದೆ. ಸಚಿವ ಶಾಮನೂರು  ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸು ವರು. ಹೋರಾಟ ಸಮಿತಿ ಅಧ್ಯಕ್ಷ ಟಿ.ಜೆ. ರಮೇಶ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಸಮಾಜದ ಗುರುಗಳಾದ ಶಿವಕುಮಾರ್ ಒಡೆಯರ್, ಮಾಜಿ ಶಾಸಕ ಎಸ್. ರಾಮಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪ, ಮಾಜಿ ಮಹಾಪೌರ ಹೆಚ್.ಬಿ. ಗೋಣೆಪ್ಪ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. 

ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಹೆಚ್.ಜಿ. ಸಂಗಪ್ಪ, ಹೆಚ್.ಬಿ. ಗೋಣೆಪ್ಪ, ಜಿ.ಸಿ. ನಿಂಗಪ್ಪ, ಜಿ.ಡಿ. ಪ್ರಕಾಶ್, ಲೋಹಿತ್ ಯರಗಲ್, ಬಿ. ರಮೇಶ್, ಜಮ್ನಳ್ಳಿ ನಾಗರಾಜ್, ಎಸ್.ಎಸ್. ಗಿರೀಶ್, ಅಡಾಣಿ ಸಿದ್ಧಪ್ಪ, ಕರಿಬಸಪ್ಪ ಕಸವಾಳ್ ಮತ್ತಿತರರು ಉಪಸ್ಥಿತರಿದ್ದರು. 

error: Content is protected !!