ದಾವಣಗೆರೆ, ನ.30- ಹಿರಿಯ ಸ್ವಾತಂತ್ರ್ಯ ಹೋರಾಟಗಾರರೂ, ಕರ್ನಾ ಟಕ ಏಕೀಕರಣದ ಸೇನಾನಿಗಳೂ, ಅಖಿಲ ಭಾರತ ವೀರಶೈವ -ಲಿಂಗಾಯತ ಮಹಾಸಭಾದ ಗೌರವಾಧ್ಯಕ್ಷರೂ ಆಗಿರುವ ಭೀಮಣ್ಣ ಖಂಡ್ರೆ ಅವರ ಜನ್ಮ ಶತಮಾನೋತ್ಸವ ಮತ್ತು ‘ಲೋಕನಾಯಕ’ ಅಭಿನಂದನಾ ಗ್ರಂಥ ಲೋಕಾರ್ಪಣೆ ಸಮಾರಂಭ ಬರುವ ಡಿಸೆಂಬರ್ 2ರಂದು ಜರುಗಲಿದೆ. ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಸಮಿತಿ, ಅಖಿಲ ಭಾರತ ವೀರಶೈವ -ಲಿಂಗಾಯತ ಮಹಾಸಭಾದ ಮತ್ತು ಶಾಂತಿವರ್ಧಕ ಶಿಕ್ಷಣ ಸಂಸ್ಥೆಗಳ ಸಹಕಾರದೊಂದಿಗೆ ಬೀದರ್ ಜಿಲ್ಲೆ ಬಾಲ್ಕಿಯ ಬಿಕೆಐಟಿ ಇಂಜಿನಿಯರಿಂಗ್ ಕಾಲೇಜ್ ಆವರಣದಲ್ಲಿ ಕಾರ್ಯಕ್ರಮ ಜರುಗಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.
January 13, 2025