ದಾವಣಗೆರೆ, ಡಿ.1- ಸಚಿವ ಜಮೀರ್ ಅಹ್ಮದ್ ಖಾನ್ ಅವರ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ ಎಂದು ಹರಿಹರ ಮಾಜಿ ಶಾಸಕ ಎಸ್.ರಾಮಪ್ಪ ಹೇಳಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧಮಕಿ ಹಾಕುವಂತಿರುವ ಪ್ರಚೋದನಕಾರಿ ಹೇಳಿಕೆಗಳು ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದರು.
ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಕೇಳಿ ಅರ್ಜಿ ಸಲ್ಲಿಸಿದ್ದೇನೆ ಎಂದ ರಾಮಪ್ಪ, ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದರೂ ಅವರ ಪರ ಕೆಲಸ ಮಾಡುವುದಾಗಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮೊಹಮ್ಮದ್ ಫೈರೋಜ್, ಬಾಬುಲಾಲ್ ಎಂ.ಎಸ್., ಹಂಚಿನ ನಾಗಪ್ಪ ಉಪಸ್ಥಿತರಿದ್ದರು.