ದಾವಣಗೆರೆ, ಡಿ. 3 – ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಘಡ ರಾಜ್ಯಗಳ ಚುನಾವಣೆಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿಗೆ ಜಿಲ್ಲಾ ಬಿಜೆಪಿ ಹರ್ಷ ವ್ಯಕ್ತಪಡಿಸುತ್ತದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಡಿಎಸ್ ಶಿವಶಂಕರ್ ತಿಳಿಸಿದ್ದಾರೆ.
ಈ ಗೆಲುವು ಬಿಜೆಪಿ ಸಿದ್ಧಾಂತಗಳ ಗೆಲುವು, ಪ್ರಧಾನಿ ಮೋದಿ ಅವರ ಜನಪರ ಯೋಜನೆಗಳ ಗೆಲುವಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗೆ ಮುನ್ಸೂಚನೆಯಾಗಿದೆ ಮತ್ತು ವಿರೋಧ ಪಕ್ಷಗಳನ್ನು ಮತದಾರ ತಿರಸ್ಕರಿಸಿದ್ದಾನೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.