ದಾವಣಗೆರೆ, ಡಿ.7- ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ಸಿದ್ದಗಂಗಾ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಹೊನಲು ಬೆಳಕಿನ ಖೋ-ಖೋ ಪಂದ್ಯಾವಳಿಯಲ್ಲಿ ಬಾಲಕರ ವಿಭಾಗದಲ್ಲಿ ಜಿಲ್ಲೆಯ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ.
ನಗರದ ಎಸ್. ಎಲ್ ಪದವಿ ಪೂರ್ವ ಕಾಲೇಜಿನ ಆರು ವಿದ್ಯಾರ್ಥಿಗಳು ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅಲ್ಲದೇ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಧನುಶ್ರೀ ತೃತೀಯ ಸ್ಥಾನ ಪಡೆದಿರುತ್ತಾರೆ.
ನಿಖಿಲ್ ಬೆಸ್ಟ್ ಅಟ್ಯಾಕರ್, ಹಾಗೂ ಹುಲಿಗೆಪ್ಪ ಬೆಸ್ಟ್ ಆಲ್ ರೌಂಡರ್ ಆಗಿ ಆಯ್ಕೆಯಾದರು.
ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಕಾರ್ಯದರ್ಶಿ ಎಲ್. ಭರತ್, ಆಡಳಿತಾಧಿಕಾರಿ ಸೋಮಶೇಖರ್ ಕಿಚಡಿ ಮತ್ತು ಪ್ರಾಚಾರ್ಯ ಕೆ.ಹನುಮಂತಪ್ಪ ಅಭಿನಂದಿಸಿದ್ದಾರೆ.