ಜಗಳೂರು, ಡಿ. 7 – ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ಅವರು ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವ ನಾನು ಸ್ವಾಗತಿಸುವೆ ಎಂದು ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್ ಪಟೇಲ್ ತಿಳಿಸಿದ್ದಾರೆ. ಪಟ್ಟಣದ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿಯನ್ನುದ್ದೇ ಶಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದಿಂದ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಚರ್ಚೆ ನಡೆಯುತ್ತಿದ್ದು.ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಚಿಸಿದರೆ ನನ್ನ ಸಂಪೂರ್ಣ ಬೆಂಬಲ ಹಾಗೂ ಸ್ವಾಗತವಿದೆ.
ರಾಹುಲ್ ಗಾಂಧಿ ಅವರ ಸ್ಪರ್ಧೆಯಿಂದ ದಾವಣಗೆರೆ ಅಕ್ಕ-ಪಕ್ಕದ ಕ್ಷೇತ್ರದ ಮೇಲೆ ಪ್ರಭಾವ ಬೀರಿ ಗೆಲುವು ಹೆಚ್ಚಾಗಲಿದೆ. ಜೊತೆಗೆ ರಾಜ್ಯದಲ್ಲಿ 25ಕ್ಕೂ ಅಧಿಕ ಸ್ಥಾನಗಳನ್ನು ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೊನ್ನೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಾತ್ಕಾಲಿಕ ಹಿನ್ನೆಡೆಯಾಗಿದ್ದರೂ ಕೂಡ ಕಾಂಗ್ರೆಸ್ ಪಕ್ಷ ಒಟ್ಟು 4,90,69,462 ಮತಗಳನ್ನು ಪಡೆದಿದೆ. ಆದರೆ ಬಿಜೆಪಿ ಪಕ್ಷ 4,81,29,325 ಮತಗಳನ್ನು ಪಡೆದಿದ್ದು.ಚುನಾವಣೆಯಲ್ಲಿ ಗೆದ್ದ ಸದಸ್ಯರಿಗಿಂತ ಅಧಿಕ ಮತಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಮತದಾರ ಪ್ರಭುಗಳು ಚಲಾಯಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಹುಮತದಿಂದ ಗೆಲುವು ಸಾಧಿಸಿ ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಶತಃಸಿದ್ದ ಎಂದು ವಿಶ್ವಾಸ ವ್ಯಕ್ತಪಡಿಸಿದರು.