ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳಿಗೆ ನಾಳೆ ಲಿಖಿತ ಪರೀಕ್ಷೆ

ದಾವಣಗೆರೆ, ಡಿ.8- ಕಲ್ಯಾಣ ಕರ್ನಾಟಕ ಪ್ರದೇಶದ ಪೊಲೀಸ್ ಕಾನ್‍ಸ್ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ), (ತೃತೀಯ ಲಿಂಗ ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ ಮತ್ತು ಬ್ಯಾಕ್‍ಲಾಗ್-454 ಹುದ್ದೆಗಳಿಗೆ  ನಾಡಿದ್ದು ದಿನಾಂಕ 10 ರ ಭಾನುವಾರ ಬೆಳಿಗ್ಗೆ 11 ರಿಂದ 12.30 ಗಂಟೆಯವರೆಗೆ ಲಿಖಿತ ಪರೀಕ್ಷೆಯನ್ನು ನಗರದ  7 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ.

ಎ.ವಿ. ಕಮಲಮ್ಮ ಮಹಿಳಾ ಕಾಲೇಜು,  ಜಿ.ಎಂ ಹಾಲಮ್ಮ ಪಿ.ಯು ಕಾಲೇಜು,  ಜಿ.ಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಹೈಸ್ಕೂಲ್ ಮೈದಾನ,   ಮೋತಿ ವೀರಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು, ರಾಜನಹಳ್ಳಿ ಸೀತಮ್ಮ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಶ್ರೀ ತರಳಬಾಳು ಜಗದ್ಗುರು ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಇಲಾಖಾ ವೆಬ್‍ಸೈಟ್‍ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದ್ದಾರೆ.

error: Content is protected !!