ದಾವಣಗೆರೆ, ಡಿ.10- ನಗರದ ದೇವರಾಜ ಅರಸು ಬಡಾವಣೆ ‘ಎ’ ಬ್ಲಾಕ್ ನಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಛಟ್ಟಿ ಅಮಾವಾಸ್ಯೆ ಪ್ರಯುಕ್ತ ಶ್ರೀ ನಾಗಲಿಂಗೇಶ್ವರ ಸ್ವಾಮಿಗೆ ನಾಡಿದ್ದು ದಿನಾಂಕ 12ರ ಮಂಗಳವಾರ ರುದ್ರಾಭಿಷೇಕ, ಮೃತ್ಯುಂಜಯ ಹೋಮ, ಪ್ರಧಾನ ದೇವತೆ ಶ್ರೀ ಮಾತಾ ಅನ್ನಪೂರ್ಣೇಶ್ವರಿಗೆ ಮಹಾ ಮಂಗಳಾರತಿ ಮತ್ತು ಸಂಜೆ 7 ಗಂಟೆಗೆ ಸಹಸ್ರ ದೀಪೋತ್ಸವ ಹಾಗೂ ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ಗೌರವಾಧ್ಯಕ್ಷ ಆರ್.ಜಿ. ನಾಗೇಂದ್ರ ಪ್ರಕಾಶ್ ತಿಳಿಸಿದ್ದಾರೆ.
January 1, 2025