ಹಾವೇರಿ, ಡಿ.10- ಇದೇ ದಿನಾಂಕ 12ರಂದು ಬೆಳಗಾವಿಯ ಸುವರ್ಣ ಸೌಧದ ಆವರಣದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಸ್ಥರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶಾಂತಿಯುತ ಪ್ರತಿಭಟನಾ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದ ಎಲ್ಲ ಸ್ವಾತಂತ್ರ್ಯ ಹೋರಾಟಗಾರರು, ಸಂಘದ ಪದಾಧಿಕಾರಿ ಗಳು, ಸದಸ್ಯರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ವಂಶಸ್ಥರು ಭಾಗವಹಿಸುವಂತೆ ಕರ್ನಾಟಕ ರಾಜ್ಯ ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಉತ್ತರಾಧಿಕಾರಿಗಳ ಸಂಘದ ಅಧ್ಯಕ್ಷ ಚಂದ್ರಶೇಖರ ಕರೇಗೌಡ ಹಲಗೇರಿ ಮತ್ತು ಪ್ರಧಾನ ಕಾರ್ಯದರ್ಶಿ ಶಿವಯೋಗಯ್ಯ ಬಿ.ಲೋಕನಗೌಡ್ರ ತಿಳಿಸಿದ್ದಾರೆ.
January 11, 2025