ದಾವಣಗೆರೆ, ಡಿ.11- ಪ್ರತಿ ತಿಂಗಳ ಎರಡನೇ ಬುಧವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಅವರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಶಾಸನಬದ್ದ ಯೋಜನೆ, ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ದೂರು ಮನವಿಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಇತ್ಯರ್ಥಪಡಿಸಲಿದ್ದಾರೆ.
ನಾಡಿದ್ದು ದಿನಾಂಕ 13 ರ ಬುಧವಾರ ಹರಿಹರ ತಾಲ್ಲೂಕಿನ ಕಡರನಾಯಕನಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಸಾರ್ವಜನಿಕರ ದೂರು-ಮನವಿಗಳನ್ನು ಸ್ವೀಕರಿಸಿ ಸಾಧ್ಯವಾದಷ್ಟು ಸ್ಥಳದಲ್ಲೇ ಇತ್ಯರ್ಥಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.