ದಾವಣಗೆರೆ, ಡಿ. 12- ಅಂತರರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳದ ಅಂಗವಾಗಿ ನಾಡಿದ್ದು ದಿನಾಂಕ 14 ರಂದು ಬೆಳಿಗ್ಗೆ 11 ಗಂಟೆಗೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಸಿರಿ ಧಾನ್ಯ ಪಾಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಪ್ರತಿ ಸ್ಪರ್ಧಿಗೆ ಒಂದೇ ಸಿಹಿ ಅಥವಾ ಖಾರ (ಸಸ್ಯಹಾರಿ ತಿನಿಸುಗಳು ಮಾತ್ರ) ತಯಾರಿಸುವ ಅವಕಾಶವಿರುತ್ತದೆ. ತಮ್ಮ ಅರ್ಜಿಯಲ್ಲಿ ನಮೂದಿಸಿದ ತಿನಿಸುಗಳನ್ನು ಮನೆಯಲ್ಲಿಯೇ ತಯಾರಿಸಿ, ದಿನಾಂಕ 14 ರಂದು ಪ್ರದರ್ಶಿಸಬೇಕು. ತಯಾರಿಸಿದ ತಿನಿಸುಗಳ ಪ್ರದರ್ಶನ ಬಳಸಿದ ಸಾಮಗ್ರಿಗಳು, ತೋರಿಕೆ ರುಚಿ, ಸುವಾಸನೆ, ಪೌಷ್ಠಿಕತೆ ಮೇಲೆ ಅಂತಿಮ ತೀರ್ಪು ಕೈಗೊಳ್ಳಲಾಗುವುದು. ಜಿಲ್ಲಾ ಮಟ್ಟಕ್ಕೆ ಪ್ರಥಮ ಬಹುಮಾನವಾಗಿ ಖಾರ ತಿನಿಸು ಅಥವಾ ಸಿಹಿ ತಿನಿಸಿಗೆ ಐದು ಸಾವಿರ ರೂ. ಬಹುಮಾನವಿರುತ್ತದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದವರು ಇದೇ ದಿನಾಂಕ 23 ರಂದು ಬೆಂಗಳೂರಿನಲ್ಲಿ ಏರ್ಪಡಿಸಿರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಬೇಕು.
ಸ್ಪರ್ಧೆಯಲ್ಲಿ ಜಿಲ್ಲೆಯ ಸಾರ್ವಜನಿಕರು ಭಾಗವಹಿಸಬಹುದು. ಆಸಕ್ತರು ನಾಳೆ ದಿನಾಂಕ 13 ರೊಳಗಾಗಿ ಹತ್ತಿರದ ಕೃಷಿ ಇಲಾಖೆ ಕಚೇರಿ, ರೈತ ಸಂಪರ್ಕ ಕೇಂದ್ರಗಳಿಗೆ ಅರ್ಜಿ ಸಲ್ಲಿಸಬಹುದು. ವಿವರಕ್ಕೆ ಸಂಪರ್ಕಿಸಿ : 8277931208, 9964221906.