ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶ ನೀಡಿದ ಸುಪ್ರೀಂ ತೀರ್ಪು

ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶ ನೀಡಿದ ಸುಪ್ರೀಂ ತೀರ್ಪು

ದಾವಣಗೆರೆ, ಡಿ.13- ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಗೆ ಸಂಬಂಧಿಸಿದಂತೆ  ಕೇಂದ್ರ ಸರ್ಕಾರದ ನಿರ್ಧಾರವನ್ನು  ಸರ್ವೋಚ್ಛ ನ್ಯಾಯಾಲಯ  ಸರಿ ಎಂದು ತೀರ್ಪು ನೀಡಿದ್ದರಿಂದ ದೇಶದ ಕಾನೂನು  ಎಲ್ಲರಿಗೂ ಒಂದೇ ಎಂಬ ಸಂದೇಶವನ್ನು  ನೀಡಿದಂತಾಗಿದೆ  ಎಂದು  ದೂಡಾ ಮಾಜಿ ಅಧ್ಯಕ್ಷ ಎ. ವೈ. ಪ್ರಕಾಶ್ ಅಭಿಪ್ರಾಯಿಸಿದ್ದಾರೆ.

ಪ್ರಧಾನಮಂತ್ರಿ ಮೋದಿ ನೇತೃತ್ವದ  ಕೇಂದ್ರ ಸರ್ಕಾರ ಕಾಶ್ಮೀರದ  ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿದ್ದನ್ನು ವಿರೋಧಿಸಿ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಲಾಗಿತ್ತು. ಸರ್ವೋಚ್ಚ ನ್ಯಾಯಾಲಯ ಈಗ ಸರಿಯಾದ  ತೀರ್ಪು ನೀಡಿದೆ. ಅದೇ ರೀತಿ ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಇರುವ ಎಲ್ಲಾ ಧರ್ಮದ  ಜನರಿಗೆ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಕ್ರಮ ಕೈಗೊಳ್ಳಲಿ. ಈ ಹಿಂದೆ ಸುಪ್ರೀಂ ಕೋರ್ಟ್ ಸಹ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಬಗ್ಗೆ ಕೇಂದ್ರ ಸರ್ಕಾರದ ನಿರ್ಧಾರವನ್ನು ತಿಳಿಸಲು ಸೂಚನೆ  ನೀಡಿತ್ತು ಎಂದು ಅವರು ತಿಳಿಸಿದ್ದಾರೆ.             

error: Content is protected !!