ದಾವಣಗೆರೆ, ಡಿ. 14 – ನಗರದ ಶ್ರಿ ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥರಾದ ಜಸ್ಟಿನ್ ಡಿ ಸೌಜಾ ಅವರಿಗೆ ಇದೇ ದಿನಾಂಕ 17 ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಸಿದ್ಧಗಂಗಾ ಶಿವಕುಮಾರ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಶ್ರೀ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ ತಿಳಿಸಿದೆ.
ಜಸ್ಟಿನ್ ಡಿ ಸೌಜಾ ಅವರು ಶೈಕ್ಷಣಿಕ ಮತ್ತು ಸಾಮಾಜಿಕ ಸೇವೆಯಲ್ಲಿ ಸಲ್ಲಿಸುತ್ತಿರುವ ಸುದೀರ್ಘ ಸೇವೆಯನ್ನು ಪರಿಗಣಿಸಿ ಅಂದು ಹಳೆಯ ವಿದ್ಯಾರ್ಥಿ ಗಳ 67ನೇ ಮಹಾಧಿವೇಶನದಲ್ಲಿ ಸಿದ್ಧಗಂಗಾ ಮಠದ ಕ್ಷೇತ್ರಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಸಾನ್ನಿಧ್ಯದಲ್ಲಿ ಈ ಪ್ರಶಸ್ತಿಯನ್ನು ಅನುಗ್ರಹಿಸಲಾಗುವು ದೆಂದು ಸಂಘದ ಕಾರ್ಯದರ್ಶಿ ಕೆ. ಹೆಚ್. ಶಿವರುದ್ರಯ್ಯ ತಿಳಿಸಿದ್ದಾರೆ.