ನಗರದಲ್ಲಿ ನಾಳೆ ಸ್ಪರ್ಧಾತ್ಮಕ ಪರೀಕ್ಷೆ

ದಾವಣಗೆರೆ, ಡಿ. 14 – ಕರ್ನಾಟಕ ಲೋಕಸೇವಾ ಆಯೋಗದಿಂದ ನಾಡಿದ್ದು ದಿನಾಂಕ 16 ಮತ್ತು 17 ರಂದು ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಈ ವೇಳೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ಸುಗಮವಾಗಿ ಪರೀಕ್ಷೆ ಗಳನ್ನು ನಡೆಸಬೇಕು ಎಂದು ಅಪರ ಜಿಲ್ಲಾಧಿ ಕಾರಿ ಪಿ.ಎನ್. ಲೋಕೇಶ್ ಸೂಚಿಸಿದರು.

ಜಿಲ್ಲಾಡಳಿತ ಭವನದ ಅಪರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಜರುಗಿದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಾಡಿದ್ದು ದಿನಾಂಕ 16 ರಂದು ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 27 ಅಭ್ಯರ್ಥಿಗಳು ಮತ್ತು ದಿನಾಂಕ 17 ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಮತ್ತು ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 1680 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.  

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ  ಜಿ. ಕೊಟ್ರೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕರಿಸಿದ್ದಪ್ಪ, ಜಿಲ್ಲಾ ಖಜಾನೆ ಅಧಿಕಾರಿ ಪ್ರಭಾವತಿ, ಡಿ.ಎಸ್.ಪಿ ರುದ್ರಪ್ಪ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

error: Content is protected !!