ದಾವಣಗೆರೆ, ಡಿ.14- ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಯತ್ನ ನಡೆಸಿದ ಅನ್ಯಕೋಮಿನವರ ಮೇಲೆ ಪೊಲೀಸರು ಕಾನೂನು ಕ್ರಮ ಜರುಗಿಸಬೇಕು ಎಂದು ಶ್ರೀರಾಮಸೇನೆ ಹಾಗೂ ಹಿಂದೂ ಜಾಗರಣ ವೇದಿಕೆ ಪ್ರಮುಖರು ಒತ್ತಾಯಿಸಿದ್ದಾರೆ.
ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಮಣಿ ಸರ್ಕಾರ್ ಹಾಗೂ ಹಿಂದೂ ಜಾಗರಣ ವೇದಿಕೆ ದಕ್ಷಿಣ ಪ್ರಾಂತ ಸಹಸಂಚಾಲಕ ಸತೀಶ್ ಪೂಜಾರಿ ಮೊನ್ನೆ ನಗರದಲ್ಲಿ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ಹೇಳಿಕೆ ನೀಡಿದರು.
ಈ ಪ್ರಕರಣವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು.
ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳನ್ನು ಪತ್ತೆ ಹಚ್ಚಿ ಕೂಡಲೇ ಬಂಧಿಸಿ, ಅವರ ಮೇಲೆ ರೌಡಿ ಶೀಟರ್ ಪ್ರಕರಣ ದಾಖಲಿಸಿ, ಗಡೀಪಾರು ಮಾಡಬೇಕು ಎಂದು ಆಗ್ರಹಿಸಿದರು.
ಹಲ್ಲೆಗೊಳಗಾದ ಯುವಕ ಶ್ರೀನಿವಾಸನ ತಾಯಿ ಹನುಮಂತಮ್ಮ ಮಾತನಾಡಿ, ನನ್ನ ಮಗನಿಗೆ ತುಂಬಾ ಹೊಡೆದಿದ್ದು ಆಸ್ಪತ್ರೆಯಲ್ಲಿ ಪ್ರಜ್ಞೆ ಇಲ್ಲದೆ ಬಿದ್ದಿದ್ದಾನೆ.
ನನ್ನ ಮಗನಿಗೆ ನ್ಯಾಯ ಕೊಡಿಸಿ ಎಂದು ಕೋರಿದರು.
ಉಭಯ ಸಂಘಟನೆಗಳ ಪ್ರಮುಖರಾದ ಸಾಗರ್ ಪಿ., ಗಿರೀಶ್, ರಾಹುಲ್, ಅನಿಲ್ ಸುರ್ವೆ,ಶ್ರೀಧರ್, ಅನಿಲ್, ಶ್ರೀಧರ್, ರಾಜು ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿದ್ದರು.