ದಾವಣಗೆರೆ,ಡಿ.14- ನಗರದ ಮಾ.ಸ.ಬ ಕಲಾ ಮತ್ತು ವಾಣಿಜ್ಯ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ವಿಶೇಷ ವಾರ್ಷಿಕ ಶಿಬಿರ ಕಂದಗಲ್ಲು ಗ್ರಾಮದಲ್ಲಿ ಆಯೋಜಿಸಲಾಗಿತ್ತು. ಶಿಬಿರದಲ್ಲಿ ಅಗ್ನಿಶಾಮಕ ದಳದ ವತಿಯಿಂದ ಅಗ್ನಿ ಶಮನ ಮುನ್ನೆಚ್ಚರಿಕೆ ಹಾಗೂ ವಿಪತ್ತು ನಿರ್ವಹಣೆಗಳ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಅಣುಕು ಪ್ರದರ್ಶನ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವೆಂಕಟೇಶ್ ಠಾಣಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಹಾಗೂ ರಾಷ್ಟ್ರೀಯ ಸೇವಾ ಸಂಯೋಜನಾಧಿಕಾರಿಗಳು, ಶಿಬಿರಾರ್ಥಿಗಳು ಹಾಜರಿದ್ದರು.
February 23, 2025