ದಾವಣಗೆರೆ, ಡಿ. 14- ಸಂವಿಧಾನದ 370 ನೇ ರದ್ಧತಿ ನಿರ್ಧಾರ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌ನ ಸಂವಿಧಾನಿಕ ಪೀಠ ಇದೊಂದು ಐತಿಹಾಸಿಕ ತೀರ್ಮಾನವಾಗಿದ್ದು, ಕಣಿವೆ ರಾಜ್ಯದ ಜನರಲ್ಲಿ ಹೊಸ ಭರವಸೆಯ ಬೆಳಕು ಮೂಡಿದೆ. ದೇಶದ ಸಾರ್ವಭೌಮತೆ ಮತ್ತು ಸಮಗ್ರತೆ ಎತ್ತಿ ಹಿಡಿದ ತೀರ್ಪುನ್ನು ಬಿಜೆಪಿ ಸ್ವಾಗತಿಸಿದೆ.
ಕಣಿವೆ ರಾಜ್ಯದಲ್ಲಿ ಇದ್ದ ಅಸ್ಥಿರತೆ ಮತ್ತು ಹಿಂಸಾಚಾರದಿಂದ ತೀವ್ರವಾಗಿ ನೊಂದಿದ್ದ ಜನರ ಹಿತಕ್ಕಾಗಿ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠದಿಂದ ಮಾನ್ಯತೆ ಸಿಕ್ಕಿರುವುದು ಸಂತಸ ತಂದಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಡಿ.ಎಸ್. ಶಿವಶಂಕರ್ ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರದ ಜನರನ್ನು ದೇಶದ ಮುಖ್ಯ ಸೈದ್ಧಾಂತಿಕ ವ್ಯಾಪ್ತಿಗೆ ತರುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಾಡಿದೆ. ಈ ಕಾರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು, ಗೃಹ ಸಚಿವ ಅಮಿತ್ ಶಾ ಅವರನ್ನು ಜಿಲ್ಲಾ ಬಿಜೆಪಿ ಅಭಿನಂದಿಸುತ್ತದೆ ಎಂದವರು ಹೇಳಿದ್ದಾರೆ.