ನಾಳೆ ವಿಕರವೇಯಿಂದ ರಾಜ್ಯೋತ್ಸವ

ದಾವಣಗೆರೆ, ಡಿ. 15- ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಇದೇ ದಿನಾಂಕ 17 ರ ಭಾನುವಾರ ಸಂಜೆ 6 ಗಂಟೆಗೆ ನಗರದ ಶಿವಯೋಗಾಶ್ರಮದ ಆವರಣದಲ್ಲಿ 68 ನೇ ಕನ್ನಡ ರಾಜ್ಯೋತ್ಸವ ಹಾಗೂ ಸುವರ್ಣ ಸಂಭ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಷ್ ದೊಡ್ಡಮನಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶ್ರೀ ಬಸವಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸುವರು. ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಶಾಮನೂರು ಶಿವಶಂಕರಪ್ಪ ಅವರು ಭುವನೇಶ್ವರಿ ದೇವಿ ಭಾವಚಿತ್ರ ಅನಾವರಣ ಮಾಡಲಿದ್ದಾರೆ.

ಟೈಲರ್‌ಗಳಿಗೆ ಕಾರ್ಮಿಕ ಕಾರ್ಡುಗಳನ್ನು ವೀಣಾ ಅವರು ವಿತರಣೆ ಮಾಡಲಿದ್ದು, ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ. ಹಾಸ್ಯ ಕಲಾವಿದ ಕೋಗಳಿ ಕೊಟ್ರೇಶ್ ಅವರಿಂದ ಹಾಸ್ಯ ಕಾರ್ಯಕ್ರಮ ಹಾಗೂ ಭಾರತಿ ವಾದ್ಯ ವೃಂದದವರಿಂದ ರಸ ಸಂಜೆ ಕಾರ್ಯಕ್ರಮ ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ವೇದಿಕೆ ಪದಾಧಿಕಾರಿಗಳಾದ ಅಮ್ಜದ್ ಅಲಿ, ಎಂ. ರವಿ, ನಾಗರಾಜ್ ಗೌಡ, ಕೆ.ಹೆಚ್‌. ಮೆಹಬೂಬ್, ಬಾಬುರಾವ್, ದಯಾನಂದ್, ರಾಮಣ್ಣ ತೆಲಿಗಿ, ಸಿದ್ದೇಶ್, ಗಿರಿಧರ್, ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!