ಜಗಳೂರು ತಾ. ಅಭಿವೃದ್ಧಿಗಾಗಿ ಸರ್ಕಾರದ ಗಮನ ಸೆಳೆದ ಶಾಸಕ

ಜಗಳೂರು ತಾ. ಅಭಿವೃದ್ಧಿಗಾಗಿ ಸರ್ಕಾರದ ಗಮನ ಸೆಳೆದ ಶಾಸಕ

ಜಗಳೂರು, ಡಿ.15- ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ 3.60 ಕೋಟಿ ರೂಪಾಯಿ ಅನುದಾನ ದೊರೆಯಲಿದೆ. ನಂಜುಂಡಪ್ಪ ವರದಿ ಅನ್ವಯ ಜಗಳೂರು ತಾಲ್ಲೂಕು ಅತಿ ಹಿಂದುಳಿದ ತಾಲ್ಲೂಕಿನ ಪಟ್ಟಿಯಲ್ಲಿದ್ದು ಕ್ಷೇತ್ರದಲ್ಲಿ ಆಸ್ಪತ್ರೆ ಸೇರಿದಂತೆ ಹಲವು ಮೂಲ ಸೌಕರ್ಯಗಳ ಅಭಿವೃದ್ಧಿಗೆ ನೆರವು ನೀಡಬೇಕೆಂದು ಶಾಸಕರು ಸದನದಲ್ಲಿ ಒತ್ತಾಯಿಸಿದರು.

ಬೆಳಗಾವಿಯ ವಿಧಾನಸಭಾ ಅಧಿವೇಶ ನದಲ್ಲಿ ಕ್ಷೇತ್ರದ ಶಾಸಕ ಬಿ. ದೇವೇಂದ್ರಪ್ಪ ಅವರು ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯ ದುಃಸ್ಥಿತಿ ಮತ್ತು ಅಭಿವೃದ್ಧಿಗಾಗಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು. ಸುಮಾರು 60 ವರ್ಷಗಳ ಹಳೆಯದಾಗಿರುವ ಸಾರ್ವಜನಿಕ ಆಸ್ಪತ್ರೆ ಕಟ್ಟಡ ತುಂಬಾ ಶಿಥಿಲವಾಗಿದ್ದು, ಮಳೆ ಬಂದರೆ ಸೋರುತ್ತಿದೆ. ಸಾರ್ವಜನಿಕರಿಗೆ ತುಂಬಾ ತೊಂದರೆ ಉಂಟಾಗಿದೆ. ತಜ್ಞ ವೈದ್ಯರು ಇಲ್ಲ, ಡಯಾಲಿಸಿಸ್ ಕೇಂದ್ರಕ್ಕೆ ಸಮರ್ಪಕ ಸೌಲಭ್ಯಗಳಿಲ್ಲ. ಇದರಿಂದಾಗಿ ರೋಗಿಗಳು ಪರದಾಡುವ ಪರಿಸ್ಥಿತಿ ಉಂಟಾಗಿದ್ದು, ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಶಾಸಕರು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದರು.

ಶಾಸಕರ ಪ್ರಸ್ತಾವನೆಗೆ ಉತ್ತರಿಸಿದ ಆರೋಗ್ಯ ಸಚಿವ  ದಿನೇಶ್ ಗುಂಡೂರಾವ್, ತಾಲ್ಲೂಕು ಕೇಂದ್ರದ ಆಸ್ಪತ್ರೆಗಳ ಅಭಿವೃದ್ಧಿಗೆ ಸರ್ಕಾರ ಮುಂದಾಗಿದ್ದು, ಜಗಳೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮೂಲ ಸೌಕರ್ಯ ಅಭಿವೃದ್ಧಿಗಾಗಿ 3.60 ಕೋಟಿ ರೂಪಾಯಿಗಳ ಕ್ರಿಯೆ ಯೋಜನೆ ಸಿದ್ಧವಾಗಿದ್ದು ಅನುದಾನ ಮಂಜೂರು ಮಾಡುವ ಮೂಲಕ ಆಸ್ಪತ್ರೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಉತ್ತರಿಸಿದರು.

error: Content is protected !!