ಇಂದು ರಶ್ಮಿ ಶಾಲಾ ರಜತ ಮಹೋತ್ಸವ

ರಶ್ಮಿ ಹೆಣ್ಣು ಮಕ್ಕಳ ಉಚಿತ ವಸತಿಯುತ ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ 10.30 ಕ್ಕೆ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ರಶ್ಮಿ ಶಾಲೆಯ ಅಧ್ಯಕ್ಷರಾದ ಅರುಣ ಪರಮೇಶ್ವರಪ್ಪ ಅಧ್ಯಕ್ಷತೆ ವಹಿಸುವರು. 

ಮುಖ್ಯ ಅತಿಥಿಗಳಾಗಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಶಾಸಕ ಶಾಮನೂರು ಶಿವಶಂಕರಪ್ಪ, ಸಂಸದ ಜಿ.ಎಂ. ಸಿದ್ದೇಶ್ವರ, ಮಾಜಿ ಸಚಿವ ಎಸ್.ಎ. ರವೀಂದ್ರನಾಥ್, ಚಿಂತಕರಾದ ಡಾ. ವಿಜಯಲಕ್ಷ್ಮಿ ಬಾಳೆಕುಂದ್ರಿ, ಡಾ.ಪ್ರಭಾ ಮಲ್ಲಿಕಾರ್ಜುನ್ ಆಗಮಿಸಲಿದ್ದಾರೆ.

error: Content is protected !!