ನಗರದಲ್ಲಿ ಇಂದು ಡಿಎಸ್‌ಎಸ್ ಜಾಗೃತಿ ಸಮಾವೇಶ

ದಾವಣಗೆರೆ, ಡಿ. 27- ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಾಳೆ ದಿನಾಂಕ 28 ರ ಗುರುವಾರ ಮಧ್ಯಾಹ್ನ 12 ಗಂಟೆಗೆ ನಗರದ ಮಹಾನಗರ ಪಾಲಿಕೆಯ ಶ್ರೀಮತಿ ರಾಧಮ್ಮ ಚನ್ನಗಿರಿ ರಂಗಪ್ಪ ಸ್ಮಾರಕ ರಂಗಮಂದಿರದಲ್ಲಿ ಸಂವಿಧಾನ ಸಮರ್ಪಣಾ ದಿನದ ಪ್ರಯುಕ್ತ ದಲಿತ, ಶೋಷಿತರ ಹಕ್ಕುಗಳಿಗಾಗಿ ಒತ್ತಾಯಿಸಿ, ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶವನ್ನು ನಡೆಸಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಬಿ. ದುಗ್ಗಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಂದು ಬೆಳಿಗ್ಗೆ 11 ಕ್ಕೆ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಮೆರವಣಿಗೆ ಮೂಲಕ ಪಾಲಿಕೆ ಆವರಣದಲ್ಲಿನ ರಂಗಮಂದಿರದಲ್ಲಿ ನಡೆಯುವ ಸಮಾ ವೇಶದ ಸ್ಥಳಕ್ಕೆ ಆಗಮಿಸಲಾಗುವುದು ಎಂದು ಮಾಹಿತಿ ನೀಡಿದರು.
ಯುವ ಕಾಂಗ್ರೆಸ್ ಮುಖಂಡ ಜಿ.ಬಿ. ವಿನಯ್ ಕುಮಾರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಚಿಂತಕ ಡಾ. ಎ.ಬಿ. ರಾಮಚಂದ್ರಪ್ಪ ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದು, ಮಾಜಿ ಸಚಿವ ಹೆಚ್. ಆಂಜನೇಯ ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಕೆ.ಎಸ್. ಬಸವಂತಪ್ಪ, ದಲಿತ ಸಂಘರ್ಷ ಸಮಿತಿ ರಾಜ್ಯ ಉಪ ಪ್ರಧಾನ ಸಂಚಾಲಕ ನಾಗಣ್ಣ ಬಡಿಗೇರ್, ಮಹಿಳಾ ಸಂಚಾಲಕಿ ನಿರ್ಮಲ, ಸದಸ್ಯ ರಮೇಶ್ ಡಾಕುಳಗಿ, ಉಪ ಪ್ರಧಾನ ಸಂಚಾಲಕ ಮಣಿಪಾಲ್ ರಾಜಪ್ಪ, ಕಟ್ಟಡ ಕಾರ್ಮಿಕರ ಸಂಘಟನೆ ರಾಜ್ಯಾಧ್ಯಕ್ಷ ಹೆಚ್.ಜಿ. ಉಮೇಶ್ ಆವರಗೆರೆ, ವಕೀಲ ಅನೀಸ್ ಪಾಷ ಮತ್ತಿತರರು ಭಾಗವಹಿಸಲಿದ್ದಾರೆ. ಕದಸಂಸ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಗಣೇಶ್ ನಿಟುವಳ್ಳಿ, ಬಿ. ಹನುಮಂತಪ್ಪ, ಲಿಂಗರಾಜ್, ತಿಪ್ಪೇಶ್ ಬಸಾಪುರ, ಗಣೇಶ್ ಮತ್ತಿತರರಿದ್ದರು.

error: Content is protected !!