ಸಿರಿಗೆರೆ, ಡಿ.27- ಇಲ್ಲಿನ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯಿಂದ ನಾಡಿದ್ದು ದಿನಾಂಕ 29ರಿಂದ 31ರವರೆಗೆ ಸಿರಿಗೆರೆಯಲ್ಲಿ ತರಳಬಾಳು ಕ್ರೀಡಾಮೇಳವನ್ನು ಹಮ್ಮಿಕೊಳ್ಳಲಾಗಿದೆ.
ನಾಡಿದ್ದು ದಿನಾಂಕ 29ರ ಶುಕ್ರವಾರ ಬೆಳಿಗ್ಗೆ 9.30ಕ್ಕೆ ಕ್ರೀಡಾಮೇಳವನ್ನು ಶ್ರೀ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಬಿ.ನಾಗೇಂದ್ರ ಉದ್ಘಾಟಿಸಲಿದ್ದಾರೆ.
ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ಏಷಿಯನ್ ಗೇಮ್ಸ್ ಪದಕ ವಿಜೇತೆ ಕು.ನಂದಿನಿ ಅಗಸರ, ಪ್ಯಾರಾ ಅಥ್ಲೀಟ್ ಕು.ರಕ್ಷಿತಾ ರಾಜು, ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್, ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಡಾ.ಹೆಚ್.ವಿ. ವಾಮದೇವಪ್ಪ, ವಿಶೇಷಾಧಿಕಾರಿ ವೀರಣ್ಣ ಎಸ್.ಜತ್ತಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಸಂಜೆ 6 ಗಂಟೆಗೆ ಸಾಂಸ್ಕೃತಿಕ ಸಮಾರಂಭ ನಡೆಯಲಿದ್ದು, ಹುಬ್ಬಳ್ಳಿ ಶ್ರೀ ಆರೂಢ ಜ್ಯೋತಿ ಶಾಂತಾಶ್ರಮದ ಶ್ರೀ ಅಭಿನವ ಸಿದ್ಧಾರೂಢ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಿವಿಲ್ ನ್ಯಾಯಾಧೀಶರಾದ ವಿನುತ ಬಿ.ಎಸ್., ಅಂತರರಾಷ್ಟ್ರೀಯ ಕಬ್ಬಡ್ಡಿ ಆಟಗಾರ್ತಿ ಗೀತಾ ಗೌಡ, ರಂಗ ಕರ್ಮಿ ಶಶಿಕಾಂತ ಯಡಹಳ್ಳಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕರಿಸಿದ್ದಪ್ಪ ಎಸ್.ಜಿ. ಬಿಜೆಪಿ ಯುವ ಮುಖಂಡ ರಘು ಚಂದನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದೇ ವೇಳೆ ಕೃಷ್ಣೇಗೌಡರ ಆನೆ ನಾಟಕ ಪ್ರದರ್ಶನ ನಡೆಯಲಿದೆ.
ದಿನಾಂಕ 30ರಂದು ಸಂಜೆ 6 ಗಂಟೆಗೆ ನಡೆಯುವ ಸಾಂಸ್ಕೃತಿಕ ಸಮಾರಂಭದ ಸಾನ್ನಿಧ್ಯವನ್ನು ಹಾವೇರಿ ಹುಕ್ಕೇರಿ ಮಠಾಧ್ಯಕ್ಷ ಶ್ರೀ ಸದಾಶಿವ ಮಹಾಸ್ವಾಮೀಜಿ ವಹಿಸಲಿದ್ದಾರೆ. ಸಂಸದ ಜಿ.ಎಂ. ಸಿದ್ದೇಶ್ವರ, ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಇತರರು ಭಾಗವಹಿಸಲಿದ್ದಾರೆ. ನಂತರ ಮಾತನಾಡುವ ಗೊಂಬೆ, ನೆರಳು ಬೆಳಕಿನಾಟ ಮತ್ತು ಮ್ಯಾಜಿಕ್ ಶೋ ಕಾರ್ಯಕ್ರಮಗಳು ನಡೆಯಲಿವೆ
ದಿನಾಂಕ 31ರಂದು ಸಂಜೆ 6ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾಗವಹಿಸಲಿದ್ದು, ಧಾರವಾಡ ಮುರುಘಾ ಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.
February 27, 2025