ದಾವಣಗೆರೆ,ಜ. 2- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಗ್ರಾಮ ಘಟಕ, ಜಿಲ್ಲಾ ಘಟಕ ಹಾಗೂ ರುದ್ರನಕಟ್ಟೆ ಗ್ರಾಮಸ್ಥರ ಸಂಯುಕ್ತಾಶ್ರಯದಲ್ಲಿ ನಾಳೆ ದಿನಾಂಕ 3 ರ ಬುಧವಾರ ಬೆಳಿಗ್ಗೆ 11 ಗಂಟೆಗೆ ತಾಲ್ಲೂಕಿನ ರುದ್ರನಕಟ್ಟೆ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಉಪಾಧ್ಯಕ್ಷ ಎಸ್.ಎಸ್. ಗಿರೀಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹೊಸದುರ್ಗದ ಕನಕ ಗುರುಪೀ ಠದ ಶ್ರೀ ಈಶ್ವರಾನಂದ ಪುರಿ ಸ್ವಾಮೀಜಿ, ಚಿತ್ರದುರ್ಗ ಯಾದವ ಮಹಾಸಂಸ್ಥಾ ನದ ಶ್ರೀ ಕೃಷ್ಣ ಯಾದವಾ ನಂದ ಸ್ವಾಮೀಜಿ, ಮಡಿವಾಳ ಮಾಚಿದೇವ ಮಹಾಸಂಸ್ಥಾನ ಮಠದ ಶ್ರೀ ಬಸವ ಮಡಿವಾಳ ಮಾಚಿದೇವ ಸ್ವಾಮೀಜಿ , ಬೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಸೇವಾಲಾಲ್ ಪೀಠದ ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಮಾಜಿ ಸಚಿವ ಹೆಚ್.ಎಂ. ರೇವಣ್ಣ, ಡಾ. ಯತೀಂದ್ರ ಸಿದ್ಧರಾಮಯ್ಯ, ಸಂಘಟನೆಯ ರಾಜ್ಯಾಧ್ಯಕ್ಷ ರಾಜ ಶೇಖರ ದೊಡ್ಡಣ್ಣ ಪುತ್ಥಳಿ ಅನಾವರಣ ಕಾರ್ಯವನ್ನು ನೆರವೇರಿಸಲಿದ್ದಾರೆ. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಶಾಸಕ ಶಾಮನೂರು ಶಿವಶಂಕರಪ್ಪ, ಸಿಎಂ ಆಪ್ತ ಸಲಹೆಗಾರ ಕೆ.ವಿ. ಪ್ರಭಾ ಕರ್, ಕೊಪ್ಪಳ ಶಾಸಕ ರಾಘವೇಂದ್ರ ಬಿ. ಹಿಟ್ನಾಳ್, ಕುಷ್ಟಗಿ ಶಾಸಕ ದೊಡ್ಡನ ಗೌಡ ಹೆಚ್. ಪಾಟೀಲ್, ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ಅಬ್ದುಲ್ ಜಬ್ಬಾರ್, ಕೆ.ಎಂ. ರಾಮಚಂದ್ರಪ್ಪ, ಮೆಹಬೂಬ್ ಪಾಷಾ, ಜೈರಾಮ್, ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಜಿ.ಬಿ. ವಿನಯ್ ಕುಮಾರ್, ಹೆಚ್.ಬಿ. ಮಂಜಪ್ಪ, ಶಿವಕಮಾರ್ ಒಡೆ ಯರ್, ಎಸ್.ಎಸ್. ಗಿರೀಶ್, ಪ್ರಸನ್ನ ಕುಮಾರ್, ದೀಪಕ್ ಬಿ. ಜೋಗಪ್ಪ ನವರ್, ಮನೋಜ್ ಮತ್ತಿತರರಿದ್ದರು. ಸಮಾಜದ ಗುರುಗಳಾದ ಹಾಲಯ್ಯ ಒಡೆಯರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಬಸವರಾಜ್, ಹನುಮಂತಪ್ಪ, ಶ್ರೀನಿವಾಸ್, ದೀಪಕ್, ಮಹಾಂತೇಶ್, ಗಣೇಶ್, ಸಂಗನ ಬಸಪ್ಪ, ಮಹಾಂತೇಶ್ ಮತ್ತಿತರರಿದ್ದರು.