ನಗರದಲ್ಲಿ ಇಂದು ಕರವೇಯಿಂದ ರಕ್ತದಲ್ಲಿ ಪತ್ರ ಚಳವಳಿ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಮತ್ತವರ ತಂಡವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ, ಇಂದು ಬೆಳಿಗ್ಗೆ 11.30 ಕ್ಕೆ ಅಕ್ಕಮಹಾದೇವಿ ರಸ್ತೆಯಲ್ಲಿರುವ ಗುರುಭವನದಲ್ಲಿ ರಕ್ತದಲ್ಲಿ ಪತ್ರ ಚಳವಳಿ ಹಮ್ಮಿಕೊಳ್ಳಲಾಗಿದೆ. ಕರವೇ ರಾಜ್ಯಾಧ್ಯಕ್ಷ ನಾರಾ ಯಣ ಗೌಡ್ರು, ಕಾರ್ಯದರ್ಶಿ ಸಣ್ಣೀರಪ್ಪ, ವಿವಿಧ ಘಟಕಗಳ ರಾಜ್ಯ ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ಕೂಡಲೇ ಬಿಡುಗಡೆ ಮಾಡುವಂತೆ ಜಿಲ್ಲಾಧ್ಯಕ್ಷ ಎಂ.ಎಸ್. ರಾಮೇಗೌಡ ಒತ್ತಾಯಿಸಿದ್ದಾರೆ.

error: Content is protected !!