ರಾಜ್ಯ ಮಟ್ಟದ ಮಹಿಳಾ ಫುಟ್‌ಬಾಲ್ ಪಂದ್ಯ

ನಗರದಲ್ಲಿ ನಾಳೆಯಿಂದ

ದಾವಣಗೆರೆ, ಜ. 4- ಜಿಲ್ಲಾ ಫುಟ್‌ಬಾಲ್ ಅಸೋಸಿಯೇಷನ್ ವತಿಯಿಂದ ಕ್ರೀಡೆಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವ ಹಿನ್ನೆಲೆಯಲ್ಲಿ ಖೇಲೋ ಇಂಡಿಯಾ ಅಡಿಯಲ್ಲಿ ನಗರದ ಲೂರ್ಡ್ಸ್ ಬಾಯ್ಸ್ ಶಾಲಾ ಆವರಣದಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ಮಹಿಳಾ ಫುಟ್‌ಬಾಲ್ ಪಂದ್ಯಾವಳಿಗಳನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಫುಟ್‌ಬಾಲ್ ಅಸೋಸಿಯೇಷನ್ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನಾಡಿದ್ದು ದಿನಾಂಕ  6 ರ ಶನಿವಾರ  ಮಧ್ಯಾಹ್ನ 1 ಗಂಟೆಗೆ  ಆರಂಭವಾಗುವ ಪಂದ್ಯಾವಳಿಗೆ ಎಸ್.ಎಸ್. ಕೇರ್ ಟ್ರಸ್ಟ್ ಲೈಫ್ ಟ್ರಸ್ಟಿ ಡಾ. ಪ್ರಭಾ ಮಲ್ಲಿಕಾರ್ಜುನ್ ಚಾಲನೆ ನೀಡಲಿದ್ದಾರೆ. ಸಂಸ್ಥೆ ಜಿಲ್ಲಾಧ್ಯಕ್ಷ ದಿನೇಶ್ ಕೆ.ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯಅತಿಥಿಗಳಾಗಿ ಎಸ್ಪಿ ಉಮಾ ಪ್ರಶಾಂತ್, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕ, ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕಿ ಲಕ್ಷ್ಮಿದೇವಿ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್ ರಾವ್ ಜಾಧವ್, ಪಾಲಿಕೆ ಸಿಇಓ ಪ್ರಿಯಾಂಕ, ಉತ್ತರ ವಲಯ ಕಾಂಗ್ರೆಸ್ ಅಧ್ಯಕ್ಷೆ ರಾಜೇಶ್ವರಿ, ದಕ್ಷಿಣ ವಲಯ ಕಾಂಗ್ರೆಸ್ ಅಧ್ಯಕ್ಷೆ ಶುಭ ಮಂಗಳ, ಪಾಲಿಕೆ ಸದಸ್ಯರಾದ ಸವಿತಾ ಗಣೇಶ್ ಹುಲ್ಮನಿ, ಆಶಾ ಉಮೇಶ್, ಸುಧಾ ಇಟ್ಟಿಗುಡಿ ಮಂಜುನಾಥ್, ನಾಗರತ್ನಮ್ಮ, ಮೀನಾಕ್ಷಿ ಜಗದೀಶ್, ಸೌಮ್ಯ ಎಸ್. ನರೇಂದ್ರಕುಮಾರ್, ಉರ್ ಬಾನು, ಶಿವಲೀಲಾ ಕೊಟ್ರಯ್ಯ, ಆರ್. ಜಯಮ್ಮ ಗೋಪಿನಾಯ್ಕ ಭಾಗವಹಿಸಲಿದ್ದಾರೆ.

ದಿನಾಂಕ 7 ರ ಭಾನುವಾರ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಪಂದ್ಯಾವಳಿಗೆ ಚಾಲನೆ ನೀಡುವರು. ಅಧ್ಯಕ್ಷತೆಯನ್ನು ಸಂಸ್ಥೆ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ವಹಿಸುವರು. 

ಮುಖ್ಯ ಅತಿಥಿಗಳಾಗಿ ರಾಜ್ಯ ಸಂಸ್ಥೆ ಅಧ್ಯಕ್ಷ ಹ್ಯಾರೀಸ್‌, ಲೆಕ್ಕಾಧಿಕಾರಿ ಡಾ. ಅಥಣಿ ಎಸ್. ವೀರಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಪಾಲಿಕೆ ಮೇಯರ್ ವಿನಾಯಕ ಪೈಲ್ವಾನ್, ಗ್ರೀನ್ ಆಗ್ರೋ ಪ್ಯಾಕ್ ಮ್ಯಾನೇಜಿಂಗ್ ಡೈರೆಕ್ಟರ್ ಬಿ.ಎಂ. ದೇವಯ್ಯ, ಮಿಲ್ಲತ್ ಸಂಸ್ಥೆ ಗೌರವ ಕಾರ್ಯದರ್ಶಿ ಸೈಯದ್ ಸೈಫುಲ್ಲಾ, ಉತ್ತರ ವಲಯ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಶಿವಕುಮಾರ್, ದಕ್ಷಿಣ ವಲಯ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಶಿವನಹಳ್ಳಿ ರಮೇಶ್, ತಂಜೀಂ ಕಮಿಟಿ ಅಧ್ಯಕ್ಷ ದಾದುಸೇಟ್, ಪಾಲಿಕೆ ಸದಸ್ಯ ಗಡಿಗುಡಾಳ್ ಮಂಜುನಾಥ್, ಚಮನ್ ಸಾಬ್ ಮತ್ತಿತರರು ಭಾಗವಹಿಸಲಿದ್ದಾರೆ. 

13 ಮತ್ತು 15 ವರ್ಷದೊಳಗಿನ ವಿಭಾಗದಲ್ಲಿ ನಡೆಯುವ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 10 ತಂಡಗಳ 200 ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸುವ ನಿರೀಕ್ಷೆ ಇದೆ. ಭಾಗವಹಿಸುವ ಕ್ರೀಡಾಪಟುಗಳಿಗೆ ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ವಿಜೇತ  ತಂಡಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನೀಡಲಾಗುವುದು ಎಂದು ಹೇಳಿದರು.

ಅಲ್ಲಾವಲ್ಲಿ ಮುಜಾಹೀದ್ ಖಾನ್, ರಫಿ, ಎಸ್.ಎಸ್. ಗಿರೀಶ್ ಅವರುಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. 

error: Content is protected !!