ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಹಿರಿಯ ನಾಗರಿಕರ ಸಹಾಯವಾಣಿ ಸಹಯೋಗದಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಆನಗೋಡು ಗ್ರಾಮದ ಶ್ರೀ ಮರುಳಸಿದ್ಧೇಶ್ವರ ಪ್ರೌಢಶಾಲಾ ಆವರಣದಲ್ಲಿ ಶಾಲಾ-ಕಾಲೇಜು ಅಂಗಳದಲ್ಲಿ ಸಾಹಿತ್ಯೋತ್ಸವದ ಅಂಗವಾಗಿ ದತ್ತಿ ಉಪನ್ಯಾಸ ನಡೆಯಲಿದೆ.
ಜಿ. ಚನ್ನಪ್ಪ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ಎಂ.ಸಿ. ಕಾವೇರಿಗೌಡ್ರು ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಶಿಕ್ಷಕ ಹೆಚ್. ರವಿ ಅಧ್ಯಕ್ಷತೆ ವಹಿಸಲಿದ್ದಾರೆ.
ಉಪನ್ಯಾಸಕ ಎಸ್.ಆರ್. ನಯನಮೂರ್ತಿ `ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಸಂದೇಶ’ ಕುರಿತು ಉಪನ್ಯಾಸ ನೀಡಲಿದ್ದಾರೆ.
ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ರೇವಣಸಿದ್ಧಪ್ಪ ಅಂಗಡಿ, ತಾಲ್ಲೂಕು ಅಧ್ಯಕ್ಷೆ ಸುಮತಿ ಜಯಪ್ಪ, ಹಿರಿಯ ನಾಗರಿಕರ ಸಹಾಯವಾಣಿ ಸಂಯೋಜಕ ನವೀನ್ ಕುಮಾರ್, ಶಿಕ್ಷಕ ನಾಗರಾಜ್ ಸಿರಿಗೆರೆ ಮತ್ತಿತರರು ಭಾಗವಹಿಸಲಿದ್ದಾರೆ.