ದಾವಣಗೆರೆ, ಜ.16- ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ದಾವಣಗೆರೆ ತಾಲ್ಲೂಕಿನ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳು www.sw.kar.nic.in ಅರ್ಜಿ ಸಲ್ಲಿಸಬಹುದು. ವಿವರಕ್ಕೆ ಸಂಪರ್ಕಿಸಿ : ಸಹಾಯಕ ನಿರ್ದೇಶಕ (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ ದಾವಣಗೆರೆ (08192-231413).
January 12, 2025