ದಾವಣಗೆರೆ, ಜ.23- ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ 2022 ನೇ ಸಾಲಿನ ಕನ್ನಡ ಪುಸ್ತಕ ಕೃತಿಗಳ ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡ ಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿ ಗಳು 2022 ರ ಜ. 1 ರಿಂದ 2022 ರ ಡಿ. 31 ರೊಳಗೆ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2022 ಮುದ್ರಿತವಾಗಿರ ಬೇಕು. ಪುಸ್ತಕಗಳ ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ನೋಂದಣಿ ಅಂಚೆ, ಕೊರಿಯರ್ ಮೂಲಕ ಇಲ್ಲವೇ ಖುದ್ದಾಗಿ ಫೆ.20 ರೊಳಗೆ ಸಲ್ಲಿಸಬೇಕು ಎಂದು ರಿಜಿಸ್ಟ್ರಾರ್ ಕರಿಯಪ್ಪ ಎನ್. ತಿಳಿಸಿದ್ದಾರೆ.
January 10, 2025