ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರುಗಳ ಸಹಯೋಗದಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ `ಬೇಟಿ ಬಚಾವೋ-ಬೇಟಿ ಪಡಾವೋ’ ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ ಅಭಿಯಾನದಡಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ.ಎನ್.ಹೆಗಡೆ ಉದ್ಘಾಟಿಸುವರು. ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ, ಪಾಲಿಕೆ ಆಯುಕ್ತೆ ರೇಣುಕಾ, ಉಪವಿಭಾಗಾಧಿಕಾರಿ ದುಗಾಶ್ರೀ ಎನ್, ಜಿಲ್ಲಾ ಆರೋಗ್ಯ – ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ಭಾಗವಹಿಸುವರು.
January 10, 2025