ವಾಟ್ಸಾಪ್‌ನಲ್ಲಿ ಆಕ್ಷೇಪಾರ್ಹ ಸಂದೇಶ: ಪ್ರಕರಣ ದಾಖಲು

ದಾವಣಗೆರೆ, ಜ.24- ವಾಟ್ಸಾಪ್‌ನಲ್ಲಿ ಆಕ್ಷೇಪಾರ್ಹ ಸಂದೇಶ ಹಂಚಿಕೊಂಡ ಹಿನ್ನೆಲೆಯಲ್ಲಿ ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ. 

ರಾಮ ಮಂದಿರ ಉದ್ಘಾಟನಾ ಸಮಯದಲ್ಲಿ ರಜಾ ನೀಡುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನವಾಗಿ ಮಾತನಾಡಿ ವಾಯ್ಸ್ ಸಂದೇಶ್ ಹರಿಬಿಟ್ಟಹಿನ್ನೆಲೆಯಲ್ಲಿ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

ಮತ್ತೊಂದು ಪ್ರಕರಣದಲ್ಲಿ ಮದೀನಾ ಮಸೀದಿ ಚಿತ್ರ ಬಳಸಿ ವಿಡಿಯೋ ಮಾಡಿದ್ದು, ಈ ವಿಡಿಯೋ ಸಮಾಜದ ಭಾವನೆಗೆ ಧಕ್ಕೆ ತರುವಂತೆ ಚಿತ್ರೀಕರಿಸಲಾಗಿದೆ. ಇದರಿಂದ ಅಶಾಂತಿ ಉಂಟಾಗುವ ಸಾಧ್ಯತೆ ಇದ್ದು ಕ್ರಮ ಕೈಗೊಳ್ಳಬೇಕು ಎಂಬ ದೂರಿನ ಮೇರೆಗೆ ಕೆಟಿಜೆ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ.

ವಾಟ್ಸ್ಆಪ್,  ಫೇಸ್‌ಬುಕ್, ಇನ್‌ಸ್ಟಾಗ್ರಾಮ್,  ಟ್ವಿಟ್ಟರ್ ಹಾಗೂ  ಇತರೆ  ಸಾಮಾಜಿಕ ಜಾಲತಾಣಗಳಲ್ಲಿ  ಯಾವುದೇ ರೀತಿಯ ಪ್ರಚೋದನಕಾರಿ, ವ್ಯಕ್ತಿ ನಿಂದನೆ, ಧಾರ್ಮಿಕ ನಿಂದನೆ, ದ್ವೇಷ ಭಾಷಣ, ದೇಶ ವಿರೋಧಿ  ಪೋಸ್ಟ್‌ ಇತ್ಯಾದಿ  ಆಕ್ಷೇಪಾರ್ಹ  ಪೋಸ್ಟ್‌ಗಳನ್ನು   ಶೇರ್  ಮಾಡುವುದು ಕಾನೂನು ಬಾಹಿರವಾಗಿದ್ದು, ಅಂತ ಪೋಸ್ಟ್‌  ಮಾಡುವಂತಹ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳ ಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ.

error: Content is protected !!