ಭರವಸೆ ನೀಡಿದ್ದ ಭದ್ರಾ ಮೇಲ್ದಂಡೆ ಯೋಜನೆ ಹಣ ಬಿಡುಗಡೆಯಾಗಲಿ : ಚಂದ್ರಪ್ಪ

ದಾವಣಗೆರೆ, ಜ.28- ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರೊದಗಿ ಸುವ ರಾಜ್ಯ ಸರ್ಕಾರದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ   ರಾಷ್ಟ್ರೀಯ ಯೋಜನೆ ಎಂದು ಘೋಷಿಣೆ ಮಾಡಿ 5,300 ಕೋಟಿ ಹಣ ಒದಗಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಆದರೆ, ಇಲ್ಲಿಯವರೆಗೂ ಯಾವುದೇ ಹಣ ಬಿಡುಗಡೆಯಾಗಿಲ್ಲ. ಈ ಯೋಜನೆಗೆ ಕೇಂದ್ರ ಸರ್ಕಾರ ತಕ್ಷಣವೇ ಅನುದಾನ ಬಿಡುಗಡೆ ಮಾಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ  ಬಿ. ಎನ್. ಚಂದ್ರಪ್ಪ  ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು. 

ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳು ಭದ್ರಾ ಯೋಜನೆಯ ಅನುಕೂಲ ಪಡೆಯಲಿವೆ. ನಾಲ್ಕು ಜಿಲ್ಲೆ, 12 ತಾಲ್ಲೂಕುಗಳ, 367 ಕೆರೆ ತುಂಬಿಸುವ ಯೋಜನೆ ಇದಾಗಿದೆ. 

error: Content is protected !!