ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಅಂಜಿನಪ್ಪ

ಹರಪನಹಳ್ಳಿ, ಜ.28- ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಇಲ್ಲಿಯ ಪುರಸಭೆಯ ಹಿರಿಯ ಸದಸ್ಯ ಎಂ.ವಿ.ಅಂಜಿನಪ್ಪ ಅವರನ್ನು ನೇಮಕ ಮಾಡಿ, ಕೆಪಿಸಿಸಿ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.

ಎಂ.ವಿ.ಅಂಜಿನಪ್ಪ ಅವರು 5 ಬಾರಿ ಪುರಸಭಾ ಸದಸ್ಯರಾಗಿ, 1 ಬಾರಿ ಅಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ , ಎನ್‌ಎಸ್‌ಯುಐ ಹಾಗೂ ಯೂತ್ ಕಾಂಗ್ರೆಸ್ ಪಕ್ಷದ ಸಂಘಟನೆ ಹೀಗೆ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ದುಡಿದಿದ್ದರಿಂದ ಇದೀಗ ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಚಿಗಟೇರಿ ಬ್ಲಾಕ್ ಕಾಂಗ್ರೆಸ್‌ಗೆ ಕುಬೇರಪ್ಪ ಅಧ್ಯಕ್ಷ : ಹರಪನಹಳ್ಳಿ ತಾಲ್ಲೂಕಿನ ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮೈದೂರು ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ, ತಾ.ಪಂ. ಮಾಜಿ ಅಧ್ಯಕ್ಷ ಕುಬೇರಗೌಡ ಅವರನ್ನೂ ಸಹ ಕೆಪಿಸಿಸಿ ಅಧ್ಯಕ್ಷರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

error: Content is protected !!