ಕಾಂಗ್ರೆಸ್ 15-20 ಕ್ಷೇತ್ರಗಳಲ್ಲಿ ಗೆಲ್ಲಲಿದೆ : ಸಿಎಂ

ಚಿತ್ರದುರ್ಗ, ಜ. 28 – ಮುಂಬುರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ 15-20 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಬಿಜೆಪಿ ಎಲ್ಲಾ 28 ಸ್ಥಾನಗಳಲ್ಲಿ ಗೆಲ್ಲುವುದಾಗಿ ಸುಳ್ಳು ಹೇಳುತ್ತಿದೆ. ನಾವು ಅವರಂತೆ ಸುಳ್ಳು ಹೇಳುವುದಿಲ್ಲ. 15ರಿಂದ 20 ಸ್ಥಾನಗಳಲ್ಲಿ ನಾವು ಗೆಲ್ಲುತ್ತೇವೆ.  ಈ ಬಗ್ಗೆ ನಾವು ಸಮೀಕ್ಷೆ ನಡೆಸಿದ್ದೇವೆ ಎಂದು ಸಿದ್ದರಾಮಯ್ಯ ಪತ್ರಕರ್ತರೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.

error: Content is protected !!