ಸೇಂಟ್ ಜಾನ್ಸ್ ಶಾಲೆಯಲ್ಲಿ ಅಭಿನಂದನೆ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ

ಸೇಂಟ್ ಜಾನ್ಸ್ ಶಾಲೆಯಲ್ಲಿ ಅಭಿನಂದನೆ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ

ದಾವಣಗೆರೆ, ಜ. 28- ನಗರದ ಸೇಂಟ್ ಜಾನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ, ಪ್ರಸಕ್ತ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಫಾಶ್ಚರ್ ರೂಬಿ ನಿರ್ಮಲಾ ಟ್ರುತ್ವೇ ಫೆಲೋಶಿಪ್ ಚರ್ಚ್ ಇವರು ಪ್ರತಿಜ್ಞಾ ವಿಧಿ ಬೋಧಿಸಿದರು. ವಿಜಯಕುಮಾರ್ ಎಂ. ಸಂತೋಷ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಡಾ. ಹೆಚ್.ವಿ. ವಾಮದೇವಪ್ಪ ಉಪಸ್ಥಿತರಿದ್ದು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

10ನೇ ತರಗತಿಯ ರಾಜ್ಯ ಪಠ್ಯಕ್ರಮ ವಿಭಾಗದಿಂದ ರುಚಿತಾ ಸಿ.ಎಂ. ಹಾಗೂ ಕೇಂದ್ರ ಪಠ್ಯಕ್ರಮ ವಿಭಾಗದಿಂದ ಭೂಮಿಕಾ ಎಲ್. ಅವರಿಗೆ ಹುಲ್ಲುಮನೆ ರಾಮಪ್ಪ ಭೀಮಪ್ಪ ಚಿನ್ನದ ಪದಕ ನೀಡಿ ಗೌರವಿಸಲಾಯಿತು. 

ಸಂಸ್ಥೆಯ ಅಧ್ಯಕ್ಷ ಹೆಚ್. ಅನಿಲ್‌ಕುಮಾರ್, ಟಿ.ಎಂ. ಉಮಾಪತಯ್ಯ, ಖಜಾಂಚಿ ಪ್ರವೀಣ್ ಹುಲ್ಲುಮನೆ, ಸೈಯದ್ ಆರಿಫ್ ಆರ್., ಶ್ರೀಮತಿ ಪ್ರೀತಾ ಟಿ. ರೈ, ನೇತ್ರಾವತಿ ಎಸ್.ಎಂ. ಉಪಸ್ಥಿತರಿದ್ದರು.

error: Content is protected !!