ನಗರದಲ್ಲಿ ನಾಳೆ ರಂಗೋಲಿ ಸ್ಪರ್ಧೆ

ದಾವಣಗೆರೆ, ಫೆ. 1 – ಪ್ರಸಕ್ತ ಸಾಲಿನ ಬೇಟಿ ಬಚಾವೋ, ಬೇಟಿ ಪಡಾವೋ ಕಾರ್ಯಕ್ರಮದಡಿಯಲ್ಲಿ ಹೆಣ್ಣು ಮಕ್ಕಳ ರಕ್ಷಣೆ ಮತ್ತು ಶಿಕ್ಷಣ ಪ್ರೋತ್ಸಾಹಿಸುವ ಕುರಿತು ಅರಿವು ಮೂಡಿಸಲು ನಾಡಿದ್ದು ದಿನಾಂಕ 3 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಗ್ಲಾಸ್ ಹೌಸ್‍ನಲ್ಲಿ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಆಸಕ್ತ ಮಹಿಳೆಯರು ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಸೂಕ್ತ ತಲೆಬರಹ, ಸ್ಲೋಗನ್‍ನೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14 ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಂ.ಸಿ.ಸಿ. ಬಿ ಬ್ಲಾಕ್, ದಾವಣಗೆರೆ ದೂ.ಸಂ: 08192-264056 ನ್ನು ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ.

error: Content is protected !!