ದಾವಣಗೆರೆ, ಫೆ. 5- ನಗರದ 12ನೇ ವಾರ್ಡಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಚಾಲನೆ ನೀಡಿದರು.
12ನೇ ವಾರ್ಡಿನ ಆಜಾದ್ ನಗರ ಸರ್ಕಲ್ ನಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ದಾವಣಗೆರೆ ನಗರದಲ್ಲಿ ಈಗಾಗಲೇ ಅಭಿವೃದ್ಧಿ ಕಾಮಗಾರಿಗಳು ಆರಂಭಗೊಂಡಿದ್ದು, ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಬೇಡಿಕೆಯನ್ನು ಸರ್ಕಾರಕ್ಕೆ ನೀಡಲಾಗಿದೆ ಎಂದರು.
ಸರ್ಕಾರದಿಂದ ಅನುದಾನ ಬಂದ ನಂತರ ಅಭಿವೃದ್ಧಿ ಆಗದ ವಾರ್ಡ್ ಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಮಹಾನಗರ ಪಾಲಿಕೆ ಸದಸ್ಯರುಗಳಾದ ಶ್ರೀಮತಿ ಉರ್ಬಾನು ಪಂಡಿತ್ , ಜಾಕಿರ್ ಅಲಿ, ಶಫೀಕ್ ಪಂಡಿತ್, ದಸ್ತಗಿರ್, ಮಹಾನಗರ ಪಾಲಿಕೆಯ ಅಭಿಯಂತರರು, ಗುತ್ತಿಗೆದಾರರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.