ತಾಲ್ಲೂಕು ಸಾಹಿತ್ಯ ಸಮ್ಮೇಳನಕ್ಕೆ ಜಾಹ್ನವಿ ಅಧ್ಯಕ್ಷತೆ

ತಾಲ್ಲೂಕು ಸಾಹಿತ್ಯ ಸಮ್ಮೇಳನಕ್ಕೆ ಜಾಹ್ನವಿ ಅಧ್ಯಕ್ಷತೆ

ದಾವಣಗೆರೆ, ಫೆ. 9- ತಾಲ್ಲೂಕಿನ ಹೆಬ್ಬಾಳು ಗ್ರಾಮದಲ್ಲಿ ಇದೇ ದಿನಾಂಕ 27 ರ ಮಂಗಳ ವಾರ 10 ನೇ ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಲೇಖಕಿ, ಕಥೆಗಾರ್ತಿ, ರಂಗಾಭಿನಯ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿರುವ ಶ್ರೀಮತಿ ಬಿ.ಟಿ. ಜಾಹ್ನವಿ ಅವರನ್ನು ಆಯ್ಕೆ ಮಾಡಲಾಗಿದೆ.

ಕಸಾಪ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ ಅವರ ನೇತೃತ್ವದಲ್ಲಿ, ತಾಲ್ಲೂಕು ಕಸಾಪ ಅಧ್ಯಕ್ಷರಾದ ಶ್ರೀಮತಿ ಸುಮತಿ ಜಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಈ ಆಯ್ಕೆಯನ್ನು ಮಾಡಲಾಗಿದೆ.

ಸಭೆಯಲ್ಲಿ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಬಿ. ದಿಳ್ಳೆಪ್ಪ, ತಾಲ್ಲೂಕು ಕಸಾಪ ಕಾರ್ಯದರ್ಶಿ ದಾಗಿನಕಟ್ಟೆ ಪರಮೇಶ್ವರಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. 

error: Content is protected !!