ಎಸ್.ಜೆ.ಎಂ. ಪಬ್ಲಿಕ್ ಸ್ಕೂಲ್ ನ 19 ನೇ ವಾರ್ಷಿಕೋತ್ಸವ ಸಮಾರಂಭವು ಇಂದು ಸಂಜೆ 5 ಗಂಟೆಗೆ ಶಿವಯೋಗ ಮಂದಿರದ ಆವರಣದಲ್ಲಿ ನಡೆಯಲಿದೆ.
ಶ್ರೀ ಬಸವ ಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಪಾಲಿಕೆ ಸದಸ್ಯೆ ರೇಣುಕಾ ಶ್ರೀನಿವಾಸ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜ್ಞಾನ ಶಕ್ತಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಡಿ. ಮಹೇಶ್ವರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಶ್ರೀ ಬಸವೇಶ್ವರ ಟ್ರಾನ್ಸ್ಪೋರ್ಟ್ ಮಾಲೀಕರಾದ ಮಹಾಂತೇಶ್ ವಿ. ಒಣರೊಟ್ಟಿ ಬಹುಮಾನ ವಿತರಿಸುವರು. ಮುಖ್ಯ ಅತಿಥಿಗಳಾಗಿ ಇನ್ಸೈಟ್ಸ್ ಐಎಎಸ್ ಸಂಸ್ಥೆಯ ಸಂಸ್ಥಾಪಕ ಜಿ.ಬಿ. ವಿನಯ್ ಕುಮಾರ್ ಕಕ್ಕರಗೊಳ್ಳ, ಸಿರ್ಪಿ ಭರತ್, ರೂಪ್ಸಾ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ, ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಇ.ಎಂ. ಮಂಜುನಾಥ ಮತ್ತಿತರರು ಭಾಗವಹಿಸಲಿದ್ದಾರೆ.