ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಇಂದು ಬೆಳಿಗ್ಗೆ 10.30 ಕ್ಕೆ ರೋಟರಿ ಬಾಲಭವನದಲ್ಲಿ ನಡೆಯಲಿದೆ.
ವೇದಿಕೆ ರಾಜ್ಯಾಧ್ಯಕ್ಷ ಹೇಮಂತ್ ನಾಗರಾಜ್ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧ್ಯಕ್ಷ ಯು. ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ರಾಜ್ಯ ಉಪಾಧ್ಯಕ್ಷ ಕೆ.ಟಿ. ಮಧು, ರಾಜ್ಯ ಸಮಿತಿ ಸದಸ್ಯ ಗುರುರಾಜ್, ವರದಿಗಾರರ ಕೂಟದ ಅಧ್ಯಕ್ಷ ಕೆ.ಏಕಾಂತಪ್ಪ, ಸುವಿದ್ಯಾನಿಧಿ ಜಿಲ್ಲಾಧ್ಯಕ್ಷ ಡಾ.ಎ.ಎಂ. ಶಿವಕುಮಾರ್, ಹಿರಿಯ ಪತ್ರಕರ್ತ ಬಾ.ಮ. ಬಸವರಾಜಯ್ಯ, ಪತ್ರಕರ್ತ ಹೆಚ್.ಎಂ.ಪಿ.ಕುಮಾರ್, ಪರಶುರಾಮ ಜಗಳಿ, ಆರ್. ಸಿದ್ಧು, ಜಗದೀಶ ಗೌಡ ಆಗಮಿಸಲಿದ್ದಾರೆ.