ಇಂದು ಬೆಳಗ್ಗೆ 10.30ಕ್ಕೆ ಮತ್ತು ಮಧ್ಯಾಹ್ನ 12.30ಕ್ಕೆ ಭಾನುವಳ್ಳಿ ಗ್ರಾಮದಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಪ್ರಯುಕ್ತ ಬಿಜೆಪಿ ಸಂಘಟನೆಯನ್ನು ಬಲಪಡಿಸುವ ದೃಷ್ಟಿಯಿಂದ ಪ್ರತಿ ಗ್ರಾಮದಲ್ಲೂ `ವಿಕಸಿತ ಭಾರತಕ್ಕಾಗಿ ಗ್ರಾಮ ಚಲೋ’ ಅಭಿಯಾನವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಗಳ ಕರಪತ್ರವನ್ನು ಹಂಚುವುದರ ಮೂಲಕ ಚಾಲನೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಶಾಸಕ ಬಿ.ಪಿ. ಹರೀಶ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್ ಹಾಗೂ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್, ಯುವ ಮುಖಂಡ ಚಂದ್ರಶೇಖರ್ ಪೂಜಾರ್, ಮುಖ್ಯ ಸಂಚಾಲಕ ಮಹೇಂದ್ರ ಹೆಬ್ಬಾಳ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಐರಣಿ ಅಣ್ಣಪ್ಪ ಮತ್ತು ಬಿಜೆಪಿ ತಾ. ಗ್ರಾಮಾಂತರ ಘಟಕದ ಅಧ್ಯಕ್ಷ ಹಿಂಡಸಘಟ್ಟಿ ಲಿಂಗರಾಜ್ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಅದಾಪುರ ವೀರೇಶ್, ಹುಗ್ಗಿ ಮಹಾಂತೇಶ್ ತಿಳಿಸಿದ್ದಾರೆ.