ದಾವಣಗೆರೆ, ಫೆ.9- ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ತಮಿಳುನಾಡಿನ ತಿರುನಲ್ವೇಲಿಯಲ್ಲಿ ಇತ್ತೀಚೆಗೆ ನಡೆದ 43ನೇ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯದಿಂದ ಭೂಲಕ್ಷ್ಮಿ ಅವರು ಭಾಗವಹಿಸಿ, ಚಕ್ರ ಎಸೆತ, ರಿಲೇ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ಹಾಗೂ 100 ಮತ್ತು 800ಮೀಟರ್ ರಿಲೇ ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿ, ಅಮೆರಿಕಾದ ಕ್ಲೂ ಲ್ಯಾಂಡ್ ನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಅಂತರರಾಷ್ಟ್ರೀಯ ಕ್ರೀಡಾಕೂಟಕ್ಕೆ ಭೂಲಕ್ಷ್ಮಿ ಆಯ್ಕೆ
