ಬೆಳ್ಳೂಡಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಚಂದ್ರಗುತ್ತ್ಯೆಮ್ಮ ದೇವಿಯ ದೇವಸ್ಥಾನದ ಉದ್ಘಾಟನೆ ಮತ್ತು ದೇವಿಯ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಾಳೆ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಜರುಗಲಿದೆ.
ಈ ಕಾರ್ಯಕ್ರಮದ ಅಂಗವಾಗಿ ಇಂದು ಬೆಳಿಗ್ಗೆ 7 ಗಂಟೆಗೆ ಹವನ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ 4 ಗಂಟೆೆಗೆ ವಿವಿಧ ಗ್ರಾಮಗಳಿಂದ ಆಗಮಿಸುವ ದೇವರುಗಳನ್ನು ಕಾಗಿನೆಲೆ ಶ್ರೀಗಳ ಸಮ್ಮುಖದಲ್ಲಿ ಬರಮಾಡಿಕೊಳ್ಳಲಾಗುವುದು. ರಾತ್ರಿ 10 ಗಂಟೆಯಿಂದ ಭಾನುವಳ್ಳಿ ಮತ್ತು ಹಾರೋಗೊಪ್ಪ ಗ್ರಾಮಗಳ ಭಜನಾ ಸಂಘದವರಿಂದ ಭಜನಾ ಸಂಘದವರಿಂದ ಭಜನಾ ಕಾರ್ಯಕ್ರಮ ಇರುತ್ತದೆ.