ಮುಖ್ಯಮಂತ್ರಿಯವರ ಜನಸ್ಪಂದನದಲ್ಲಿ ದೂರು
ದಾವಣಗೆರೆ, ಫೆ. 13- ಡಿಡಿಸಿಸಿ ಬ್ಯಾಂಕ್ನಲ್ಲಿ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವುದಾಗಿ ಬೆಂಗಳೂರಿನಲ್ಲಿ ಮೊನ್ನೆ ನಡೆದ ಮುಖ್ಯಮಂತ್ರಿಗಳ ವಿಶೇಷ ಜನ ಸ್ಪಂದನ ಕಾರ್ಯಕ್ರಮದಲ್ಲಿ ಶ್ರೀಕಾಂತ ಮುದ್ದಿ ಅವರು ದೂರು ಸಲ್ಲಿಸಿದ್ದಾರೆ. ದಾವಣಗೆರೆ ಡಿಸಿಸಿ ಬ್ಯಾಂಕ್ನಿಂದ 2022-23ನೇ ಸಾಲಿನಲ್ಲಿ 48 ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿತ್ತು. ನಂತರ ನಡೆದ ನೇಮಕಾತಿಯಲ್ಲಿ ಅಕ್ರಮ ನಡೆದಿದೆ. ಮಾಹಿತಿ ಹಕ್ಕು 2005ರ ಅಡಿಯಲ್ಲಿ ನೇಮಕಾತಿ ಬಗ್ಗೆ ಮಾಹಿತಿ ಕೇಳಿದರೆ ಅಧಿಕಾರಿಗಳು ಮಾಹಿತಿ ನೀಡುತ್ತಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.