ದಾವಣಗೆರೆ, ಫೆ.15- ತರಳಬಾಳು ಹುಣ್ಣಿಮೆ ಮಹೋತ್ಸವದ ಅಂಗವಾಗಿ ದಾವಣಗೆರೆ ತಾಲ್ಲೂಕು ತಾಲ್ಲೂಕು ಗ್ರಾಮೀಣ ಯುವ ಕ್ರೀಡಾ ಸ್ಪರ್ಧೆಯನ್ನು ಇದೇ ದಿನಾಂಕ 18ರ ಭಾನುವಾರ ಬೆಳಿಗ್ಗೆ 8 ಗಂಟೆಗೆ ನಗರದ ಹದಡಿ ರಸ್ತೆಯ ಮಾಗನೂರು ಬಸಪ್ಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಪುರುಷರು ಮತ್ತು ಮಹಿಳೆಯರ ಪ್ರತ್ಯೇಕ ವಿಭಾಗ ಗಳಲ್ಲಿ ಒಟ್ಟು 8 ಕ್ರೀಡೆಗಳನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ನೀಡಲಾಗುತ್ತದೆ. ವಿವರಕ್ಕೆ ಮೊ. 99801 55612, 99725 58940, 99007 64666 ರಲ್ಲಿ ಸಂಪರ್ಕಿಸಿ ಹೆಸರು ನೋಂದಾಯಿಸ ಬಹುದು ಎಂದು ಶಿವಸೈನ್ಯದ ಸಂಚಾಲಕ ಶಶಿಧರ ಹೆಮ್ಮನಬೇತೂರು ತಿಳಿಸಿದ್ದಾರೆ. ನಗರಸಭೆ ಮಾಜಿ ಅಧ್ಯಕ್ಷ ಶಿವನಳ್ಳಿ ರಮೇಶ್, ಡಿಡಿಸಿಸಿ ಬ್ಯಾಂಕ್ ನಿರ್ದೇಶಕ ಬೇತೂರು ಕರಿಬಸಪ್ಪ, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ನಾಗರಾಜ ಲೋಕಿಕೆರೆ, ಉದ್ಯಮಿ ಶಿವಗಂಗಾ ಶ್ರೀನಿವಾಸ್, ಸಾಧು ಸದ್ಧರ್ಮ ವೀರಶೈವ ಸಮಾಜದ ಕಾರ್ಯದರ್ಶಿ ಮಾಗನೂರು ಸಂಗಮೇಶ್ವರ ಗೌಡ್ರು, ಕಸಾಪ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಇ.ಎಂ. ಮಂಜುನಾಥ, ನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಗೀತಾ ದಿಳ್ಳೆಪ್ಪ ಸೇರಿದಂತೆ ಅನೇಕ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.