ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ

ದಾವಣಗೆರೆ, ಫೆ. 18 –  ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ನಾಗರಿಕ ಸೇವಾ ಪೊಲೀಸ್ ಕಾನ್‍ಸ್ಟೇಬಲ್ (ಪುರುಷ ಮತ್ತು ಮಹಿಳಾ) ಮತ್ತು (ತೃತೀಯ ಲಿಂಗ ಪುರುಷ, ಮತ್ತು ಮಹಿಳಾ) ಹಾಗೂ ಸೇವಾನಿರತ ಮತ್ತು ಬ್ಯಾಕ್‍ಲಾಗ್-1137 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು  ಇದೇ ದಿನಾಂಕ 25 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30 ರವರೆಗೆ ನಡೆಸಲಾಗುವುದು ಎಂದು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದ್ದಾರೆ.

error: Content is protected !!