ನಾಳೆ ಬೆಳ್ಳೂಡಿ ಗ್ರಾಮದೇವತೆ ದೇವಸ್ಥಾನ ಉದ್ಘಾಟನೆ

ದಾವಣಗೆರೆ, ಫೆ.20- ಹರಿಹರ ತಾಲೂಕು ಬೆಳ್ಳೂಡಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮದೇವತೆ ಉಡಸಲಾಂಬಿಕಾ ದೇವಿ ದೇವಸ್ಥಾನದ ಉದ್ಘಾಟನೆ, ಶ್ರೀದೇವಿಯ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಸಮಾರಂಭವು ನಾಡಿದ್ದು ದಿನಾಂಕ 22 ಹಾಗೂ 23ರಂದು ನಡೆಯಲಿದೆ ಎಂದು ದೇವಸ್ಥಾನದ ಅಧ್ಯಕ್ಷ ಮರುಳಸಿದ್ದಯ್ಯ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಿನಾಂಕ 22ರಂದು ಬೆಳಿಗ್ಗೆ  5.30ರಿಂದಲೇ ಧಾರ್ಮಿಕ ವಿಧಿ ವಿಧಾನಗಳು ಆರಂಭವಾಗಲಿವೆ. ರಾತ್ರಿ 11 ಗಂಟೆಗೆ ಗಣಪತಿ ಪೂಜೆ, ನವಗ್ರಹ ಹೋಮ, ಮಂಡಲ ರಚನೆ, ಭಜನಾ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಫೆ. 23ರಂದು  ಶ್ರೀ ನಾಗದೇವರ ಮೂರ್ತಿ ಹಾಗೂ ಉಡಸಲಾಂಬಿಕಾ ದೇವಿ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ, ಮಧ್ಯಾಹ್ನ 12ಗಂಟೆಗೆ  ನಡೆಯಲಿದೆ. ವಿವಿಧ ಮಠಾಧೀಶರು, ಧರ್ಮದರ್ಶಿಗಳು ಸಾನ್ನಿಧ್ಯ ವಹಿಸುವರು. ಶಾಸಕ ಶಾಮನೂರು ಶಿವಶಂಕರಪ್ಪ, ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಶಾಸಕ ಬಿ.ಪಿ. ಹರೀಶ್, ಮಾಜಿ ಶಾಸಕ ಎಸ್. ರಾಮಪ್ಪ, ಎಚ್.ಎಸ್. ಶಿವಶಂಕರ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇರಿದಂತೆ, ಇನ್ನಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ದೇವಸ್ಥಾನ ಸಮಿತಿ ಹಾಗೂ ಗ್ರಾಮದ ಪ್ರಮುಖರಾದ ಹನುಮಂತಗೌಡ್ರು, ಜಿ.ಎಸ್. ಸಂದೀಪ್ ಗೌಡ್ರು, ಬಿ.ವೈ. ಭೀಮಪ್ಪ, ಬಾತಿ ಮಹೇಶ್ವರಪ್ಪ, ಶಂಕರಪ್ಪ ಪೂಜಾರ ಪತ್ರಿಕಾಗೋಷ್ಠಿಯಲ್ಲಿದ್ದರು.

error: Content is protected !!