ನಗರದಲ್ಲಿ 26 ರಂದು ಬೃಹತ್ ಉದ್ಯೋಗ ಮೇಳ

ದಾವಣಗೆರೆ, ಫೆ.22- ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ (ಬೆಂಗಳೂರು) ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಇದೇ ದಿನಾಂಕ 26 ಮತ್ತು 27 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.

ಉದ್ಯೋಗಾಕಾಂಕ್ಷಿಗಳು  HYPERLINK “https://udyoga.skillconnet.kaushalkar.com/” \t “_blank” https://udyoga.skillconnet.kaushalkar.com ಲಿಂಕ್‍ನಲ್ಲಿ ನೋಂದಾಯಿಸಿಕೊಳ್ಳಬಹುದು. 

ಜಿಲ್ಲೆಯ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನ ಉದ್ಯೋಗಾಕಾಂಕ್ಷಿಗಳು ಈ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕೆಂದು  ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

error: Content is protected !!