ದಾವಣಗೆರೆ, ಫೆ. 22 – ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ಜಿ.ಎಸ್.ಶ್ಯಾಮ್ ಅವರನ್ನು ಭಾಜಪ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರ ನ್ನಾಗಿ ನೇಮಿಸಿ ರಾಜ್ಯ ಘಟಕ ಆದೇಶ ಹೊರಡಿಸಿದೆ.
ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂದೀಪ್ ರವಿ ಅವರ ಶಿಫಾರಸ್ಸಿನ ಮೇರೆಗೆ ಶ್ಯಾಮ್ ಅವರನ್ನು ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು ಅವರು ಈ ನೇಮಕ ಮಾಡಿದ್ದಾರೆ.